ಕಾರವಾರ : ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷೆ, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರಿಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡುವ ಬೆಹರಿನ್ ಇಂಡಿಯಾ ಇಂಟರ್ ನ್ಯಾಶನಲ್ ಅವಾರ್ಡ್ಸ- 2024 ಒಲಿದು ಬಂದಿದೆ. ಇಂದು ಸಂಜೆ ಬೆಹರಿನ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರೂಪಾಲಿ ಎಸ್.ನಾಯ್ಕ ಅವರು ಇತ್ತಿಚೀನ ದಿನಗಳಲ್ಲಿ 2ನೇ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದಂತಾಗಿದೆ.
ಏಷ್ಯಾನೆಟ್ ಮಾಧ್ಯಮ ಸಂಸ್ಥೆ ಉದ್ಯಮ, ರಾಜಕೀಯ, ಸಂಘಟನೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸಾಧನೆ ಮಾಡಿದವರನ್ನು ಗುರುತಿಸಿ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ರೂಪಾಲಿ ಎಸ್.ನಾಯ್ಕ ಪಾತ್ರರಾಗಿದ್ದಾರೆ.
ಒಬ್ಬ ಮಹಿಳೆಯಾಗಿ ತಳಮಟ್ಟದಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೂಪಾಲಿ ಎಸ್.ನಾಯ್ಕ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಸಂಘಟನೆಯ ಮೂಲಕ ಶಾಸಕರಾಗಿ ಆಯ್ಕೆಯಾದರು. ಕೊರೋನಾ, ಪ್ರವಾಹದಂತಹ ಸಂದರ್ಭದಲ್ಲಿ ವೈಯಕ್ತಿಕವಾಗಿ ಜನತೆಗೆ ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವರ ಸಂಘಟನೆ, ಅಭಿವೃದ್ಧಿಗೆ ನೀಡಿದ ಕೊಡುಗೆ, ಮಾನವೀಯ ನೆರವು, ಸಾಮಾಜಿಕ ಅಭಿವೃದ್ಧಿ ಮತ್ತಿತರ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಇತ್ತೀಚೆಗೆ ವಿಶ್ವವಾಣಿ ಮಾಧ್ಯಮ ಸಂಸ್ಥೆ ನೀಡುವ ಗ್ಲೋಬಲ್ ಅಚೀವರ್ಸ್ ಅವಾರ್ಡನ್ನು ರೂಪಾಲಿ ಎಸ್.ನಾಯ್ಕ ಅವರಿಗೆ ಕಾಂಬೋಡಿಯಾದಲ್ಲಿ ಪ್ರಧಾನ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಬೆಹರಿನ್ ನಲ್ಲಿ ಇಂದು ಸಂಜೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಸುವರ್ಣ ನ್ಯೂಸ್, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ದೇವರ ಆಶೀರ್ವಾದ, ನನ್ನ ಕ್ಷೇತ್ರದ ಜನತೆಯ ಹಾರೈಕೆ ಇವುಗಳಿಂದ 2ನೇ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಘೋಷಣೆಯಾಗಿದೆ. ನನ್ನನ್ನು ಆಶೀರ್ವದಿಸಿದ ನನ್ನ ಕ್ಷೇತ್ರದ ಜನತೆಗೆ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ. ನನಗೆ ಜನ್ಮನೀಡಿದ ತಂದೆ ತಾಯಿ, ನಮ್ಮ ಕುಟುಂಬ, ಬಿಜೆಪಿ ಕಾರ್ಯಕರ್ತರು, ರಾಜ್ಯದ ಜನತೆ ಹಾಗೂ ಅಭಿಮಾನಿಗಳನ್ನು ಈ ಶುಭ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸುತ್ತೇನೆ. ನನಗೆ ಆದರ್ಶರಾದ ಪ್ರಧಾನಿ ನರೇಂದ್ರ ಮೋದಿಜಿ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರಿಗೆ ರೂಪಾಲಿ ಎಸ್. ನಾಯ್ಕ ಧನ್ಯವಾದಗಳನ್ನು ತಿಳಿಸಿದ್ರು..