ಅಂಕೋಲಾ: ಅಂಕೋಲಾ ತಾಲ್ಲೂಕು ಹತ್ತನೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಪೂರ್ವ ತಯಾರಿಯಾಗಿ ಸ್ವಾಗತ ಸಮಿತಿ ಮತ್ತು ಇತರೆ ಕಾರ್ಯಕಾರಿ ಸಮಿತಿಗಳನ್ನು ರಚಿಸಲು ಜನವರಿ 23ರಂದು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಪಿಎಂ ಪ್ರೌಢಶಾಲೆಯ ರೈತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಮಾರ್ಗದರ್ಶಕ ಮಂಡಳಿ ಮತ್ತು ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆ ಮತ್ತು ಮಾರ್ಗದರ್ಶನ ನೀಡಬೇಕು ಮತ್ತು ಸಮ್ಮೇಳನದ ಯಶಸ್ವಿಗೆ ಸಹಕರಿಸಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಗೌರವ ಕಾರ್ಯದರ್ಶಿಗಳಾದ ಜಗದೀಶ ಜಿ ನಾಯಕ ಹೊಸ್ಕೇರಿ, ಜಿ ಆರ್ ತಾಂಡೇಲ,ಕೋಶಾಧ್ಯಕ್ಷ ಸಿದ್ಧಲಿಂಗಸ್ವಾಮಿ ವಸ್ತ್ರದ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



