ಯಡೋಗಾದಲ್ಲಿ ಶ್ರೀರಾಮ ಶೋಭಾಯಾತ್ರೆ

ಹಳಿಯಾಳ : ತಾಲ್ಲೂಕಿನ ಯಡೋಗಾದಲ್ಲಿ ಶ್ರೀರಾಮ ಶೋಭಾಯಾತ್ರೆಯನ್ನು ಶನಿವಾರ ರಾತ್ರಿ ಹಮ್ಮಿಕೊಳ್ಳಲಾಯ್ತು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪಣೆಯ ನಿಮಿತ್ತವಾಗಿ ಯಡೋಗಾದಲ್ಲಿ ಶ್ರೀರಾಮ ಶೋಭಾಯಾತ್ರೆಯನ್ನು ಏರ್ಪಡಿಸಲಾಗುತ್ತು. ಗ್ರಾಮದ ಎಲ್ಲ ರಸ್ತೆಗಳಲ್ಲಿ ಶೋಭಾಯಾತ್ರೆಯು ಸಂಚರಿಸಿತು. ಹಿಂದೂ ಧರ್ಮ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.