ರಾ.ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಜಖಂ.! ಚಾಲಕ-ನಿರ್ವಾಹಕರಿಗೆ ಸಣ್ಣಪುಟ್ಟ ಗಾಯ

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಗುಳ್ಳಾಪುರದ ಚಿಕ್ಕುಮನೆ ಬಳಿ ಭಾನುವಾರ ನಡೆದಿದೆ. ಸರಕು ತುಂಬಿದ ಲಾರಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪಲ್ಟಿಯಾಗಿದೆ.
ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಲಾರಿ ತೆರವಿಗೆ ಕ್ರಮ ಕೈಗೊಂಡಿದ್ದಾರೆ. ಲಾರಿ ರಸ್ತೆಯ ಬದಿಯಲ್ಲಿ ಬಿದ್ದಿರುವುದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿಲ್ಲ