ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ಮೋದಿ!

ಆಯೋಧ್ಯೆ(ಜ.21) ಕೋಟ್ಯಾಂತರ ಹಿಂದೂಗಳ ಶ್ರದ್ಧಾ, ಭಕ್ತಿ ಹಾಗೂ ಆಸ್ಮಿತೆಯ ಕೇಂದ್ರವಾಗಿದ್ದ ಆಯೋಧ್ಯೆ ರಾಮ ಮಂದಿರದ ಪ್ರಾಣಪ್ರತಿಷ್ಠೆಯಾಗಿದೆ. ರಾಮಜನ್ಮಭೂಮಿಯಲ್ಲಿ ಭಗವಾನ್ ಶ್ರೀರಾಮನ ಮಂದಿರ ಲೋಕಾರ್ಪಣೆಯಾಗಿದೆ. 1991ರಿಂದ ಬರೋಬ್ಬರಿ 33 ವರ್ಷಗಳ ಕಾಲ ಬಿಜೆಪಿ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿತ್ತು. ತನ್ನ ಪ್ರಣಾಳಿಕೆಯಲ್ಲಿ ಮಂದಿರ್ ವಹೀ ಬನಾಯೇಂಗೆ ಅನ್ನೋ ಭರವಸೆಯನ್ನು ನೀಡಿತ್ತು. ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಬಿಜೆಪಿಯ ದಿಗ್ಗಜ ನಾಯಕರು ರಾಮ ಮಂದಿರಕ್ಕಾಗಿ ಹೋರಾಟ ಮಾಡಿದ್ದಾರೆ. ಆದರೆ ಮೋದಿ ಪ್ರಧಾನಿಯಾದ ಬಳಿಕ ಹಾಗೂ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಹೋರಾಟದ ಸ್ವರೂಪ ಬದಲಾಯಿತು. ಇದರ ಪರಿಣಾಮ ಬಿಜೆಪಿಯ 33 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸುವ ಮೂಲಕ ಭವ್ಯ ರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ.