ದಾಂಡೇಲಿ : ನಗರದ ಹಳಿಯಾಳ ರಸ್ತೆಯಲ್ಲಿರುವ ಶ್ರೀ ಮಾರುತಿ ಮಂದಿರದಲ್ಲಿ ಸ್ಥಳೀಯ ಶ್ರೀ ಗಜಾನನ ಯುವಕ ಮಂಡಳ ಹಾಗೂ ಯುವತಿ ಮಂಡಳದ ಆಶ್ರಯದಡಿ ಪ್ರಭು ಶ್ರೀರಾಮಚಂದ್ರನ ಸ್ಮರಣೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.