ಜೋಯಿಡಾ : ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತವಾಗಿ ಕಾರಿನ ಮುಂಭಾಗ ಜಖಂಗೊಂಡ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿಯಲ್ಲಿ ಬುಧವಾರ ನಡೆದಿದೆ.
ಕೇರಳ ಮೂಲದ ಖಾಸಗಿ ಬಸ್ ಗಣೇಶಗುಡಿಯ ವಾಟರ್ ಆಕ್ಟಿವಿಟೀಸ್ ಕೇಂದ್ರದ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದಿಂದಾಗಿ ಎದುರುಗಡೆಯಿಂದ ಬರುತ್ತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್‌ನಲ್ಲಿ ಕರ್ಕಶವಾದ ಡಿಜೆ ಅಳವಡಿಸಲಾಗಿದ್ದು, ಬಸ್ ಚಾಲಕನ ನಿರ್ಲಕ್ಷದಿಂದ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರಾಮನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.