ಅಂಕೋಲಾ ತಾಲೂಕಿನಲ್ಲಿ ಅವಹೇಳನಕಾರಿ ಪೋಸ್ಟರ್‌ ಹಂಚಿಕೆ – ಹಿಂದೂ ಕಾರ್ಯಕರ್ತರ ಆಕ್ರೋಶ

Madrid, Spain January 27 2022. Silhouette of man looking mobile phone

ಅಂಕೋಲಾ : ತಾಲೂಕಿನಲ್ಲಿ ಅನ್ಯ ಕೋಮಿನ ಯುವಕನೊಬ್ಬ ಅವಹೇಳನಕಾರಿ ಫೋಸ್ಟರ್‌ವೊಂದನ್ನು ಸಾಮಾಜಿಕ ಜಾಲಾತಣದಲ್ಲಿ ಹಂಚಿಕೊಂಡಿದ್ದಕ್ಕೆ ವಿವಾದ ಬುಗಿಲೆದ್ದಿದೆ. ಅಷ್ಟ್ಕಕೂ ಆಗಿದ್ದು ಏನಂದ್ರೆ, ಇನ್‌ಸ್ಟ್ರಾಗ್ರಾಮ್‌ನಲ್ಲಿ ಅನ್ಯಕೋಮಿನ ಯುವಕನೊಬ್ಬ ಅವಹೇಳನಕಾರಿ ಪೋಸ್ಟರ್‌ ಹಂಚಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಆಕ್ರೋಶಗೊಂಡು, ಅನ್ಯ ಕೋಮಿನ ಯುವಕನ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪಟ್ಟಣದ ಪೊಲೀಸ್‌ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ದೂರು ದಾಖಲಸಿ ಕ್ರಮ ಕೈಗೊಳ್ಳಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಹಿಂದೆ ಹಲವು ಬಾರಿ ಅಂಕೋಲಾದಲ್ಲಿ ಈ ರೀತಿ ಅನ್ಯ ಕೋಮಿನ ಜನರು ಶಾಂತಿ ಕದಡುವ ಪ್ರಯತ್ನ ಮಾಡಿದ್ದರು.  ಆದರೆ ಹಿಂದೂಗಳು ಕ್ಷಮಿಸಿ ಸುಮ್ಮನಿದ್ದರು. ಆದರೆ ಈಗ ಹಾಗಿಲ್ಲ. ಕ್ರಮ ಆಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ…

ಸಾರ್ವಜನಿಕರು ದೂರು ನೀಡದೆ ಇದ್ದಲ್ಲಿ ಸ್ವಯಂ ಪ್ರೇರಿತವಾಗಿ ಪೋಲಿಸರು ಸುಮೋಟೋ ದೂರು ದಾಖಲಸಿ ಗರಿಷ್ಠ ಮಟ್ಟದ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಪಿಐ ಸಂತೋಷ್ ಶೆಟ್ಟಿ ಹೇಳಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು..