ಜೋಯಿಡಾ : ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ ಅವರು ನೇತೃತ್ವದಲ್ಲಿ ಆಯೋಜಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ ಅವರು ಈ ಅಭಿಯಾನದ ಬಗ್ಗೆ ಮಾತನಾಡುತ್ತಾ, ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣವಂತರಾದರೇ ಸದೃಢ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಜನಮಾನಸಕ್ಕೆ ಅರಿವು ಮೂಡಿಸುವ ಮೂಲಕ ಪ್ರತಿಯೊಂದು ಮಗುವನ್ನು ಶಿಕ್ಷಣವಂತನನ್ನಾಗಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದರು. ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಯು ಕೂಡ ಪ್ರತಿಯೊಬ್ಬ ಪಾಲಕರ ಮುಖ್ಯ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ವಲಯ ಮೇಲ್ವಿಚಾರಕಿಯರು, ಮಕ್ಕಳು, ಕಿಶೋರಿಯರು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.