ಸಿದ್ದಾಪುರ: ಸಂವಿಧಾನದ ಆಶಯಗಳನ್ನು ಅರಿತು, ಈ ನೆಲದ ಸಂಸ್ಕೃತಿ, ಕಾನೂನನ್ನು ಪ್ರತಿಯೊಬ್ಬ ಪ್ರಜೆಯೂ ಪಾಲನೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಎಂ ಆರ್ ಕುಲಕರ್ಣಿ ಹೇಳಿದರು
ಅವರು ಪಟ್ಟಣದ ಐತಿಹಾಸಿಕ ನೆಹರೂ ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೌರವಿಸಲಾಯಿತು. ಈ ವೇಳೆಯಲ್ಲಿ ಜನಪ್ರತಿನಿಧಿಗಳು ವಿವಿಧ ಇಲಾಖೆ ಅಧಿಕಾರಿಗಳು ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತಾಲೂಕಿನಲ್ಲೆಡೆ ಸಂಭ್ರಮ ಹಾಗೂ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಿರುವ ದೃಶ್ಯವೂ ಕಂಡು ಬಂದಿತು.