ದಾಂಡೇಲಿ : ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಅವರು ಬಿಜೆಪಿಯಿಂದ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡು, ಇದೀಗ ಕಾಂಗ್ರೆಸ್ ನಿಂದ ಮರಳಿ ಬಿಜೆಪಿಗೆ ಸೇರ್ಪಡೆಯಾಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆಯವರು ಹೇಳಿದರು.
ಅವರು ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಾ, ಯಾವ ಕಾರಣದಿಂದಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು.