ಹಳಿಯಾಳ : ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಳಿಯಾಳ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ತಾಲೂಕಿನ ದುಸಗಿ ಗ್ರಾಮದಲ್ಲಿ 434 ಜನ ವಸತಿ ಮನೆಗಳಿಗೆ ಪೈಪ್ ಲೈನ್ ಅಳವಡಿಸಿ ನಳ ಸಂಪರ್ಕ ಕಲ್ಪಿಸಿ ಕುಡಿಯುವ ನೀರು ಪೂರೈಸುವ ಕಾಮಗಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಶನಿವಾರ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಣೆಗೆ ಮೊದಲ ಆಧ್ಯತೆಯನ್ನು ನೀಡಲಾಗುತ್ತದೆ. ಈ ಪ್ರದೇಶದ ಜನತೆಯ ಕುಡಿಯುವ ನೀರಿನ ಸಮಸ್ಯೆಯನ್ನು ಮನಗಂಡು ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯಾದ ನನ್ನ ಆಧ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು, ಕಾಮಗಾರಿಗಳನ್ನು ತರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.