ಮುಂಡಗೋಡ: ದೊಡ್ಡ ಪ್ರಮಾಣದ ಪತ್ತಿನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸಂಘದ ಸಭಾಭವನದಲ್ಲಿ ಆಡಳಿತ ಮಂಡಳಿಯ ಸಭೆ ನಡೆಸಲಾಯಿತು. ಸಭೆ ಮುಕ್ತಾಯವಾದ ನಂತರ ಅಧ್ಯಕ್ಷ ಉಮೇಶ್ ಬಿಜಾಪೂರ ಹಾಗೂ ಉಪಾಧ್ಯಕ್ಷ ಶಿವಾನಂದ ಕುರುಬರ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿಂದೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಅಧಿಕಾರಾವಧಿಯನ್ನು ನಿಗದಿಪಡಿಸಲಾಗಿತ್ತು. ಇತರೆ ಸದಸ್ಯರುಗಳಿಗೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸಂಘದ ವ್ಯವಸ್ಥಾಪಕರಿಗೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ.