ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.


ತಾಲೂಕಿನ ಹೆಗ್ನೂರಿನಲ್ಲಿ ಮದ್ಯ ಮುಕ್ತ ಗ್ರಾಮ ನಾಮಫಲಕ ಉದ್ಘಾಟಿಸಿ ಗ್ರಾಮಸ್ಥರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು. ನಂತರ ನೇರ್ಲಮನೆ(ಗೋಳಿಮಕ್ಕಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಯಾನವನ ಉದ್ಘಾಟಿಸಿ ವಿವೇಕ ಶಾಲಾ ಕೊಠಡಿಗೆ ಚಾಲನೆ ನೀಡಿದರು. ತದನಂತರ ತಾಲೂಕಿನ ಹುಕ್ಕಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ, ಸ್ಥಳೀಯ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.