ಸರ್ಕಾರಿ ಪ.ಪೂ ಕಾಲೇಜು ಕೋಲಸಿರ್ಸಿಯಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ಸಿದ್ದಾಪುರ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಲಸಿರ್ಸಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ದಾಪುರ ವತಿಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿಯರಿಗೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪೂರ್ಣಿಮಾ ದೊಡ್ಮನಿ (ಸಿಡಿಪಿಯು) ಮತ್ತು ಅರುಣಾ ತಳವಾರ, ಪ್ರಾಚಾರ್ಯ ಪ್ರಶಾಂತ್ ತಾಲಿಬಾಗಿಲ , ಉಪನ್ಯಾಸಕ ಮಂಜಪ್ಪ ಎಂ ಜಿ, ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು ಗೋಪಾಲ ಕಾನಳ್ಳಿ ಕಾರ್ಯಕ್ರಮ ನಿರೂಪಿಸಿದರು