ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ವಿಶೇಷ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತ ರಾಧಾಕೃಷ್ಣ ಭಟ್ಟ

ಭಟ್ಕಳ: ಪತ್ರಕರ್ತ ರಾಧಾಕೃಷ್ಣ ಭಟ್ಟ ಇವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಪತ್ರಕರ್ತರ ಸಂಘ ಕೊಡಮಾಡುವ ವಿಶೇಷ ರಾಜ್ಯ ಪ್ರಶಸ್ತಿಗೆ ರಾಜ್ಯ ಸಂಘ ಆಯ್ಕೆ ಮಾಡಿದ್ದು ಫೆ.೩ ಮತ್ತು ೪ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಪತ್ರಕರ್ತರಾಗಿ ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಸಮಾಜದ ಕೆಳವರ್ಗದವರ ಪರವಾಗಿ, ನ್ಯಾಯಯುತ, ಸತ್ಯನಿಷ್ಟ ವರದಿ, ಅಭಿವೃದ್ಧಿ ಪರವಾಗಿ ಸದಾ ತಮ್ಮ ಚಿಂತನೆಗಳನ್ನು ಹರಿಬಿಡುತ್ತಾ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಂಘಟನೆ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಈಗಾಗಲೇ ಸಂಘಟನೆಗಾರಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಇವರು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ೨೦೦೫ರಲ್ಲಿ ಹಳಿಯಾಳದ ಜಿಲ್ಲಾ ಸಮ್ಮೇಳನದಲ್ಲಿ ಸಮ್ಮಾನಿಸಿದ್ದು, ೨೦೧೬ರಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಕೊಡಮಾಡುವ ಪ್ರತಿಷ್ಠಿತ ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಗೂ ಕೂಡಾ ಭಾಜನರಾಗಿದ್ದು, ೨೦೧೮ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಸಾಂಘಿಕ ಪ್ರಶಸ್ತಿ ಸೇರಿದಂತೆ ಭಟ್ಕಳದ ರೋಟರಿ ಕ್ಲಬ್, ಅಂಜುಮಾನ್ ಕಾಲೇಜಿನ ಕನ್ನಡ ಸಂಘ, ಕೆ.ಎಸ್.ಆರ್.ಟಿ.ಸಿ. ಕನ್ನಡ ಸಂಘ, ಮಾನಾ ಕುಟುಂಬ, ಆನಂದಾಶ್ರಮ ವಿದ್ಯಾ ಸಂಸ್ಥೆ, ಶಾರದೋತ್ಸವ ಸಮಿತಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಇವರ ಸೇವೆಯನ್ನು ಗುರುತಿಸಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ೧೯೯೩ರಿಂದ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ರಾಷ್ಟಿçÃಯ ಕಾರ್ಯಕಾರಿಣಿ ಸದಸ್ಯರಾಗಿ, ಪ್ರಸ್ತುತ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯರು ಎನ್ನುವುದನ್ನು ಸ್ಮರಿಸಬಹುದು.