ಕಾರವಾರ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್, ಜನಹಿತದ ಜೊತೆಗೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್.ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ…
ಬಜೆಟ್‌ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗಿದೆ. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳು, ಹೆಚ್ಚಲಿವೆ. ಗೃಹ ನಿರ್ಮಾಣದ ಕನಸು ಕಾಣುತ್ತಿರುವ ಬಡ ಹಾಗೂ ಮಧ್ಯಮ ವರ್ಗಕ್ಕೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು…
ಇದೊಂದು ಜನಪರ, ಅಭಿವೃದ್ಧಿ ಪರ ಹಾಗೂ ವಿಕಾಸಪೂರಕ ಬಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ. ಹಿಂದಿನ ಐದು ವರ್ಷದ ಆಡಳಿತದಲ್ಲಿ ಯಾವ ಯಾವ ವಲಯಕ್ಕೆ ಶಕ್ತಿ ತುಂಬಿದ್ದೇವೆ ಎನ್ನುವ ಮಾಹಿತಿಯನ್ನು ಹಣಕಾಸು ಸಚಿವರು ನೀಡಿದ್ದಾರೆ. ಯುವಜನತೆ ಸೇರಿ ಹಲವು ವರ್ಗಕ್ಕೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಭರವಸೆ ನೀಡಿದ್ದಾರೆ. ಉತ್ಪಾದನಾ ಕ್ಷೇತ್ರದ ಓಟಕ್ಕೆ ಆದ್ಯತೆ ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಶ್ವದಲ್ಲೇ ಭಾರತವನ್ನು ಬಲಾಢ್ಯ ಆರ್ಥಿಕ ಶಕ್ತಿಯಾಗಿ ರೂಪುಗೊಳಿಸಲು ಈ ಬಜೆಟ್ ಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ…