ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಜೋಯಿಡಾ : ತಾಲ್ಲೂಕು ಕೇಂದ್ರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ ಅವರು ಹಾಗೂ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪುಷ್ಪ ಗೌರವವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ‌ ಮಾತನಾಡಿದ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ ಅವರು ಸರ್ವ ಸಮಾನತೆಯ ಸಮಾಜ‌ ನಿರ್ಮಾಣಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಡಿವಾಳ‌ ಮಾಚಿದೇವರ ತತ್ವಾದರ್ಶಗಳು ಸದಾ ಅನುಕರಣೀಯ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.