ದಾಂಡೇಲಿ : ನಗರದ ಸಮೀಪದಲ್ಲಿರುವ ಜನತಾ ಕಾಲೋನಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ಅವಿವಾಹಿತ ಯುವಕನೋರ್ವ ನೇಣಿಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಸ್ಥಳೀಯ ಜನತಾ ಕಾಲೋನಿಯ ನಿವಾಸಿಯಾಗಿರುವ 29 ವರ್ಷ ವಯಸ್ಸಿನ ಆಕಾಶ್ ಸುರೇಶ ಮೇದಾರ ಎಂಬಾತನೆ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಅತಿಯಾದ ಕುಡಿತದ ಚಟವನ್ನು ಹೊಂದಿದ್ದ ಈತನು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ತನ್ನ ನಿರ್ಮಾಣದ ಹಂತದಲ್ಲಿರುವ ಮನೆಯ ಕೊಠಡಿಯ ಒಳಗಡೆ ನೇಣಿಗೆ ಕೊರೊಳೊಡ್ಡಿದ್ದಾನೆ.
ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಕೃಷ್ಣ ಅರಕೇರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.