ಟಾಟಾ ಏಸ್‌ ಡಿಕ್ಕಿಗೆ ಆಟೋದಿಂದ ಹಾರಿ ಬಿದ್ದ ನಾಲ್ವರು

ಕಾರವಾರ: ಆಟೋ ಹಾಗೂ ಟಾಟಾ ಏಸ್ ನಡುವೆ ಅಪಘಾತ (Road Accident) ಸಂಭವಿಸಿದ್ದು, ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬೆಳಕೆ ಗ್ರಾಮದ ಬಳಿ ಈ ಅಪಘಾತ ನಡೆದಿದೆ.

ಗಾಯಗೊಂಡ ನಾಲ್ವರನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಮಹಿಳೆ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಆಟೋ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.