ಬಸವೇಶ್ವರ ಭಾವಚಿತ್ರನ ಅನಾವರಣ ಕಾರ್ಯಕ್ರಮ ಯಶಸ್ವಿಗೊಳಿಸಿ: ತಹಶೀಲ್ದಾರ್ ಅನಂತಶಂಕರ

ಅಂಕೋಲಾ: ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ತಾಲ್ಲೂಕು ಮಟ್ಟದಲ್ಲಿ ವ್ಯವಸ್ಥಿತವಾಗಿ ಆಚರಿಸಿ ಯಶಸ್ವಿಗೊಳಿಸಿ ಎಂದು ತಹಶೀಲ್ದಾರ್ ಅನಂತಶಂಕರ್ ಹೇಳಿದರು.
ಪಟ್ಟಣದ ತಾಲ್ಲೂಕು ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ಸಂಜೆ ನಡೆದ ಬಸವೇಶ್ವರ ಭಾವಚಿತ್ರ ಅನಾವರಣ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರ ಮಾತನಾಡಿದರು. ಪಟ್ಟಣದ ಸಮಾಜ ಮಂದಿರಲ್ಲಿ ಫೆಬ್ರುವರಿ 17ರಂದು ಮುಂಜಾನೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಮಂದಿರದಿಂದ ಜೈ ಹಿಂದ್ ವೃತ್ತದವರೆಗೆ ಸಾಗುವ ಮೆರವಣಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಸಮಾಪ್ತಿಯಾಗುವುದು. ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಕುಂಭ ಹೊತ್ತು ಪಾಲ್ಗೊಳ್ಳಲಿದ್ದಾರೆ. ಪ್ರಾಚಾರ್ಯ ಎಸ್ ವಿ ವಸ್ತ್ರದ್ ಜಗಜ್ಯೋತಿ ಬಸವೇಶ್ವರರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.
ಎಲ್ಲ ಇಲಾಖೆಗಳಲ್ಲಿ ಕಡ್ಡಾಯವಾಗಿ ಬಸವೇಶ್ವರರ ಫೋಟೋ ಅಳವಡಿಸಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು. ಜನಪ್ರತಿನಿಧಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ತಹಶೀಲ್ದಾರ್ ತಿಳಿಸಿದರು.
ಗ್ರೇಡ್ -2,ತಹಶೀಲ್ದಾರ್ ಜಿ ಬಿ ಕುಲಕರ್ಣಿ,
ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ, ತಾಲೂಕು ಆರೋಗ್ಯ ಅಧಿಕಾರಿ ಜಗದೀಶ ನಾಯ್ಕ, ಹಿರಿಯ ಉಪನ್ಯಾಸಕ ಮಹೇಶ ನಾಯಕ, ಎಸ್ಐ ಚಂದ್ರಕಾಂತ ನಾಯ್ಕ, ಸಮಾಜ ಕಲ್ಯಾಣ ಅಧಿಕಾರಿ ಶಾಂತಲಾ ನಾಯಕ, ಕಂದಾಯ ಇಲಾಖೆ ಅಧಿಕಾರಿಗಳಾದ ಮಂಜುನಾಥ ನಾಯ್ಕ, ಭಾರ್ಗವ ನಾಯಕ, ಭಾವನಾ ನಾಯಕ ಮತ್ತಿತರರು ಇದ್ದರು.