ಸಿಬ್ಬಂದಿಗಳ ಆರೋಗ್ಯ ಕಾಳಜಿಗಾಗಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ:- ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಅವರಿಗಾಗಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಇತರರಿಗೆ ಮಾದರಿಯಾಗಿದ್ದಾರೆ.

            ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಸಹಯೋಗದಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿದ ಜಿಲ್ಲಾಧಿಕಾರಿಗಳು, ಸದಾ ಒತ್ತಡದ ಕೆಲಸದ ಕಾರಣ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಆರೋಗ್ಯದ ಕಡೆ ಗಮನ ನೀಡದೇ ಅನಾರೋಗ್ಯಕ್ಕೆ ಒಳಗಾಗುತ್ತಾರೆ ಇದರಿಂದ ಅವರ ಕುಟುಂಬದ ಮೇಲೆ ಹಾಗೂ ಸಾರ್ವಜನಿಕ ಕೆಲಸಗಳಿಗೂ ಕೂಡಾ ತೊಂದರೆಯಾಗುತ್ತದೆ ಆದ್ದರಿಂದ ಒತ್ತಡ ರಹಿತವಾಗಿ ಕೆಸಲ ಮಾಡುವುದರ ಜೊತೆಗೆ ಎಲ್ಲಾ ನೌಕರರು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದರು.

            ಕಚೇರಿ ಕರ್ತವ್ಯದ ಅವಧಿಯಲ್ಲಿ ಆರೋಗ್ಯ ತಪಾಸಣೆಗೆ ಅಸ್ಪತ್ರೆಗಳಿಗೆ ತೆರಳಲು ಸಿಬ್ಬಂದಿಗಳಿಗೆ ಅನಾನುಕೂಲವಾಗುವ ಹಿನ್ನಲೆಯಲ್ಲಿ ಕಚೇರಿ ಆವರಣದಲ್ಲಿಯೇ ನುರಿತ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಗಳ ವಿತರಣೆ ಮಾಡಲಾಗುತ್ತಿದೆ. ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಅನಾವಶ್ಯಕ ಒತ್ತಡಗಳಿಗೆ ಒಳಗಾಗದೇ ಶಾಂತಚಿತ್ತತೆಯಿAದ ತಮ್ಮ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಜೊತೆಗೆ ತಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವಂತೆ ತಿಳಿಸಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರೂ ಕೂಡಾ ಶಿಬಿರದಲ್ಲಿ ವಿವಿಧ ಪರೀಕ್ಷೆಗಳನ್ನು ಮಾಡಿಸಿಕೊಂಡು, ವೈದ್ಯರಿಂದ ಅಗತ್ಯ ವೈದ್ಯಕೀಯ ಸಲಹೆಗಳು ಮತ್ತು ಉಚಿತ ಔಷಧಗಳನ್ನು ಪಡೆಯುವ ಮೂಲಕ ಶಿಬಿರದ ಪ್ರಯೋಜನ ಪಡೆದರು.

ತಮ್ಮ ಆರೋಗ್ಯದ ಬಗ್ಗೆ ಈ ರೀತಿ ಕಾಳಜಿ ವಹಿಸಿ, ಉಚಿತ ಆರೋಗ್ಯ ಶಿಬಿರ ಆಯೋಜಿಸಿದ್ದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಈ ನಡೆಗೆ ಸಿಬ್ಬಂದಿಗಳಿAದ ವ್ಯಾಪಕ ಮೆಚ್ಚುಗೆ ದೊರೆಯಿತು.