ಕಾರವಾರ:- 2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ವತಿಯಿಂದ ಫೆ. 20 ಮತ್ತು 21 ರಂದು ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಗಿದ್ದ ಉತ್ತರ ಕನ್ನಡ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಈ ಕ್ರೀಡಾಕೂಟವನ್ನು ಫೆ. 22 ಮತ್ತು 23 ರಂದು ಕಾರವಾರದ ಮಾಲಾದೇವಿ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಸಹಕರಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.