ಹೊನ್ನಾವರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಹೊನ್ನಾವರ ಫೆ.18 : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಹೊನ್ನಾವರ ತಾಲೂಕಿನ ಬಳಕೂರ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

 ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಿದ್ದಾಪುರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಿದ್ದಾಪುರ , ಫೆ.18 : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಸಿದ್ದಾಪುರ  ತಾಲೂಕಿನ ಹೇರೂರು ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಫೆ.19 ರಂದು ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಿದ್ದಾಪುರ , ಫೆ.18 : ಫೆಬ್ರವರಿ 17 ರಂದು ಸಂವಿಧಾನ ಜಾಗೃತಿ ಜಾಥಾವು ಸಿದ್ದಾಪುರ ತಾಲೂಕಿನ ,  ನೀಲ್ ಕುಂದ, ತಂಡಗುಡಿ, ಹೆಗ್ಗರಣೆ  ಗ್ರಾಮ ಪಂಚಾಯಿತಿಗಳಲ್ಲಿ  ಹಾಗೂ ಹೊನ್ನಾವರ ತಾಲ್ಲೂಕಿನ ಮಾಗೋಡು, ಕೊಡಣಿ,ಮಂಕಿ ಸಂಚರಿಸಿ ಅರಿವು ಮೂಡಿಸಲಿದೆ.