ಅಂಕೋಲಾ : ಕಾಂಗ್ರೆಸ್ಸಿನ ಅಸಂಘಟಿತ ಕಾರ್ಮಿಕ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ವಿಜಯ ಪೀಟರ್ ಪಿಳ್ಳೈ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಸುಕ್ರು ಗೌಡ ಬಡಗೇರಿ ಆಯ್ಕೆಯಾಗಿದ್ದಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಇಬ್ಬರೂ ನಿಷ್ಠಾವಂತರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ನೇಮಕಾತಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ ಅನುಮತಿ ಮೇರೆಗೆ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರು ನೇಮಕಾತಿ ಆದೇಶ ನೀಡಿದ್ದಾರೆ. ವಿಜಯ ಪಿಳ್ಳೆ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಮಾನವೀಯ ಸೇವೆಗಳಿಗಳಿಂದ ಪಟ್ಟಣದಲ್ಲಿ ಉತ್ತಮ ಒಡನಾಟ ಹೊಂದಿದ್ದಾರೆ.
ಇಬ್ಬರ ಆಯ್ಕೆಗೆ ಹರ್ಷ ವ್ಯಕ್ತಪಡಿಸಿ ಅಂಕೋಲಾ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಜಾತಾ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ ಡಿ ನಾಯ್ಕ, ಶಾಸಕರ ಆಪ್ತ ಕಾರ್ಯದರ್ಶಿ ಜಗದೀಶ್ ಖಾರ್ವಿ, ಸುರೇಶ ನಾಯ್ಕ ಅಸ್ಲೆಗದ್ದೆ ಮತ್ತಿತರು ಸನ್ಮಾನ ಕಾರ್ಯದಲ್ಲಿ ಪಾಲ್ಗೊಂಡರು…