ಬಡಕಾನಶಿರಡಾದಲ್ಲಿ ಟೆಂಪೊ ಟ್ರಾವೆಲರ್ ಪಲ್ಟಿ

ದಾಂಡೇಲಿ : ನಗರದಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಟೆಂಪೋ ಟ್ರಾವೆಲರೊಂದು ದಾಂಡೇಲಿ -ಅಂಬಿಕಾನಗರ ರಸ್ತೆಯಲ್ಲಿ ಬರುವ ಬಡಕಾನಶಿರಡಾದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಟೆಂಪೋ ಟ್ರಾವೆಲರ್ ನಜ್ಗುಗುಜ್ಜಾಗಿದ್ದು, ಟೆಂಪೊ ಟ್ರಾವೆಲರಿನಲ್ಲಿದ್ದ ಪ್ರಯಾಣಿಕರಲ್ಲಿ ಓರ್ವನಿಗೆ ಗಾಯವಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.