ಹೊನ್ನಾವರ : ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ ಎಸ್. ನಾಯ್ಕ ನೇತೃತ್ವದಲ್ಲಿ ಹೊನ್ನಾವರ ತಾಲೂಕು ಬಿಜೆಪಿ ಮಂಡಲ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು..
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರೂಪಾಲಿ ಎಸ್. ನಾಯ್ಕ ಅವರನ್ನು ಈ ವೇಳೆ ಹೊನ್ನಾವರ ಮಂಡಲದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯ್ತು…
ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಮಾತನಾಡಿ, ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಹುದ್ದೆ ಸಿಗಲಿಲ್ಲ ಎಂದು ಬೇಸರಿಸಿಕೊಳ್ಳದೆ ಕಾರ್ಯ ನಿರ್ವಹಿಸಿ. ಪಕ್ಷದ ಗೆಲುವಿಗೆ ಶ್ರಮಿಸಿ. ಪಕ್ಷವನ್ನು ಸಂಘಟಿಸಿ. ದೇವ ಮಾನವ ಎಂದು ನಂಬಿರುವ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜನರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳ ಮಾಹಿತಿ ಮತ್ತು ಯೋಜನೆಯನ್ನು ಜನರಿಗೆ ತಲುಪಿಸಬೇಕು. ಪಕ್ಷವನ್ನು ಬಲಿಷ್ಠಗೊಳಿಸಬೇಕು. ಒಬ್ಬ ಕಾರ್ಯಕರ್ತ ಕನಿಷ್ಠ ಹತ್ತು ಮನೆಗಳಿಗೆ ಭೇಟಿ ನೀಡಿ, ಅವರಿಂದ ಪಡೆದುಕೊಂಡ ಯೋಜನೆ, ತಲುಪಬೇಕಾದ ಸೌಲಭ್ಯಗಳ ಮಾಹಿತಿಯನ್ನು ಸಂಪೂರ್ಣ ಕಲೆ ಹಾಕಬೇಕು. ವಿಸ್ತಾರಕರೊಂದಿಗೆ ಕ್ಷೇತ್ರದಲ್ಲಿ ಓಡಾಟ ನಡೆಸಬೇಕು ಎಂದು ಹೇಳಿದ್ರು..
ಈ ವೇಳೆ ಹೊನ್ನಾವರ ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ ಮಾತನಾಡಿ, ರೂಪಾಲಿ ನಾಯ್ಕರವರ ನೇತೃತ್ವದಲ್ಲಿ ಈ ಸಭೆ ಯಶಸ್ವಿಯಾಗಿದೆ. ಪಕ್ಷ ನನ್ನನ್ನು ಮಂಡಲ ತಾಲೂಕಾಧ್ಯಕ್ಷನಾಗಿ ಆಯ್ಕೆ ಮಾಡಿ ಜವಾಬ್ದಾರಿ ನೀಡಿದೆ. ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಎರಡನ್ನು ಎದುರಿಸುವ ಸವಾಲು ಮುಂದಿದೆ. ಹಾಗಾಗಿ ಎಲ್ಲರೂ ಕೂಡ ಪಕ್ಷ ಸಂಘಟನೆಗೆ ಕೈ ಜೋಡಿಸೋಣ ಎಂದು ಹೇಳಿದ್ರು..
ಬಳಿಕ ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್ ನೀಡಿದ್ರೆ ಸ್ಪರ್ಧೆ ಮಾಡ್ತೀರಾ ಅನ್ನೋ ನುಡಿಸಿರಿ ವಾಹಿನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷರು, ನಮ್ಮಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ.. ನಾನೇ ಅಂತಲ್ಲ.. ಯಾರಿಕೆ ಟಿಕೆಟ್ ನೀಡಿದ್ರೂ ಅವರನ್ನು ಗೆಲ್ಲಿಸಲು ಸಜ್ಜಾಗಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು…
ಇನ್ನು ಬಿಜೆಪಿ ಸರ್ಕಾರವಿದ್ದಾಗ ಕಾರವಾರ – ಅಂಕೋಲಾ ಕೇತ್ರದಲ್ಲಿ ನಾನು ಹೆಚ್ಚೆಚ್ಚು ಕಾಮಗಾರಿಗಳನ್ನು ಮಾಡಿಸಿದ್ದೇ. ಆದ್ರೀಗ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವುದೇ ಅನುದಾನ ನೀಡುತ್ತಿಲ್ಲ. ಹಾಲಿ ಶಾಸಕರು ಏನು ಕೆಲಸ ಮಾಡ್ತಿದ್ದಾರೆ ಅನ್ನೋದು ಮಾಧ್ಯಮಮಿತ್ರರಿಗೆ ಗೊತ್ತಿರೋ ಸಂಗತಿ ಎಂದು ಹೇಳಿದ್ರು…
ಇದಕ್ಕೂ ಮುನ್ನ ಭಟ್ಕಳದಲ್ಲಿ ಸಭೆ ನಡೆಸಿದ ರೂಪಾಲಿ ನಾಯ್ಕ ಅವರು ಮತ್ತೋಮ್ಮೆ ಮೋದಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ್ರು..
ಈ ವೇಳೆ ಪ್ರಧಾನ ಕಾರ್ಯದರ್ಶಿ ಯೋಗೆಶ ಮೇಸ್ತ, ಗಣಪತಿ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ಸುಬ್ರಾಯ ವಾಳ್ಕೆ, ಜಿಲ್ಲಾಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಓಬಿಸಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ನಾಯ್ಕ, ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಪ್ರಮೋದ ನಾಯ್ಕ, ರಾಷ್ಟ್ರೀಯ ಪರಿಷತ್ ಸದಸ್ಯ ಎಂ.ಜಿ.ನಾಯ್ಕ, ನಿಕಟ ಪೂರ್ವ ಜಿಲ್ಲಾ ಉಪಾಧ್ಯಕ್ಷರಾದ ಉಮೇಶ ನಾಯ್ಕ, ಭಾಗ್ಯ ಮೇಸ್ತ ವಿಶೇಷ ಆಹ್ವಾನಿತರಾದ ಜಿ.ಜಿ. ಶಂಕರ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ರು..