ಕಾರವಾರ :-ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ 1 ಮತ್ತು 2 ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಮಾರ್ಚ್ 1 ರಂದು ಬೆಳಗ್ಗೆ 10 ಗಂಟೆಗೆ ಹಳಿಯಾಳದ ತಾಲೂಕು ಕಚೇರಿಯಲ್ಲಿ ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜೋಯಿಡಾ ತಾಲೂಕು ಕಚೇರಿಯಲ್ಲಿ ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಬರ ನಿರ್ವಹಣೆ ಕುರಿತು ಸಭೆ ನಡೆಸಲಿದ್ದಾರೆ.
ಮಾರ್ಚ್ 2 ರಂದು ಬೆಳಗ್ಗೆ 10 ಗಂಟೆಗೆ ಮುಂಡಗೋಡ ತಾಲೂಕು ಕಚೇರಿಯಲ್ಲಿ ಮುಂಡಗೋಡ ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಬರ ನಿರ್ವಹಣೆ ಕುರಿತು ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.