ಕಾರವಾರ: ರಾಜ್ಯಸಭೆಗೆ ನಾಸೀರ್ ಹುಸೇನ್ ಆಯ್ಕೆಯಾದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದ ಒಳಗೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ವಿಚಾರ ಖಂಡಿಸಿ ಕಾರವಾರ ನಗರ ಮತ್ತು ಗ್ರಾಮೀಣ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು..
ಕಾಂಗ್ರೇಸನ ಸೈಯದ್ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆಯಾದ ಗೆಲುವಿನ ಸಂಭ್ರಮದಲ್ಲಿದ್ದ ಕಾಂಗ್ರೇಸ್ ಕಾರ್ಯಕರ್ತರಿಂದ ನಾಸೀರ್ ಹುಸೇನ್ ಪಕ್ಕದಲ್ಲೇ ಇರುವಾಗಲೇ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ರಾಷ್ಟ್ರವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೆ ಮೊಳಗಿದೆ ಎಂದರೆ, ಕಾಂಗ್ರೇಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲ್ಲಿ ಕಟ್ಟಿಕೋಂಡಿರಬಹುದು ಎಂದು ಅಂದಾಜಿಸಲು ಈ ಘಟನೆ ಸಾಕ್ಷಿ ಒದಗಿಸಿದೆ.
ರಾಜ್ಯಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ಥಾನಿ ಬಂಬಲಿತ ಉಗ್ರರೇ ಇರಬೇಕು. ತನ್ನನ್ನು ರಕ್ಷಿಸಲು ತಮ್ಮ ಮನಸ್ಥಿತಿಯ ಕಾಂಗ್ರೇಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ್ ಸಾಳಂಕಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ನಯನ ನಿಲಾವರ್, ನಗರಸಭೆಯ ಮಾಜಿ ಅಧ್ಯಕ್ಷರು ನಿತಿನ್ ಪಿಕಳೆ, ಅಶೋಕ್ ಗೌಡ, ಉದಯ ನಾಯ್ಕ್, ಅಭಿ, ಗ್ರಾಮ ಪಂಚಾಯತಿ ಶಿರವಾಡ ಅಧ್ಯಕ್ಷರಾದ ಅಶ್ವಿನಿ ನಾಯ್ಕ್, ವೈಶಾಲಿ ತಾಂಡೆಲ್, ಮನೋಜ್ ಭಟ್, ನಗರಸಭೆಯ ಸದಸ್ಯರು, ಗ್ರಾಮ ಪಂಚಾಯತಿಯ ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು..