ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​

ಬೆಂಗಳೂರು, ಮಾರ್ಚ್​​ 02: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ (ಮಾ.02) ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ. ವಿಐಪಿ ಲೈನ್​​ನಲ್ಲಿ ಪಾರ್ಕಿಂಗ್​ ಅವಧಿಯನ್ನು ಅರ್ಧ ಗಂಟೆಯಿಂದ 5 ರಿಂದ 10 ನಿಮಿಷಕ್ಕೆ ಇಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ರಾತ್ರ-ಹಗಲು ಮೂರು ಪಾಳಯದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.