ಕಾರವಾರ – ಮಾರ್ಚ್ 8 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ರಜೆ ಮಾರ್ಚ್ 9 ರಂದು 2ನೇ ಶನಿವಾರ ವಾರಾಂತ್ಯ, ಮಾರ್ಚ್ 10ರಂದು ಭಾನುವಾರ, ಇರುವುದರಿಂದ ಈ ರಜೆಗಳನ್ನು ಉಪಯೋಗಿಸಿಕೊಂಡು, ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಹಬ್ಬದ ಅವಧಿಯಲ್ಲಿ ಸುಮಾರು 110 ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಹಬ್ಬ ಮುಗಿದ ಮೇಲೆ ಮಾರ್ಚ್ 10 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಿಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.