ಕಾರವಾರ:- ಕಾರವಾರದ ಕ್ರಿಮ್ಸ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅಗತ್ಯ ತಜ್ಞ ವೈದ್ಯರ ನೇಮಕ ಕುರಿತಂತೆ ಲೋಕಾಯಕ್ತದ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.
ಅವರು ಇಂದು ಕ್ರಿಮ್ಸ್ ನ ಆಸ್ಪತೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು.
ಕ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಉಪ ಲೋಕಾಯುಕ್ತರಿಗೆ ಆಸ್ಪತೆಯಲ್ಲಿದ್ದ ರೋಗಿಗಳ ಸಂಬAದಿಕರು ಮತ್ತು ಸಾರ್ವಜನಿಕರು ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಅಸ್ಪತ್ರೆಯ ಅಗತ್ಯತೆ ಮತ್ತು ತಜ್ಞ ವೈದ್ಯರ ಕೊರತೆ ಬಗ್ಗೆ ಮನವಿ ಮಾಡಿದರು.
ಈ ಬಗ್ಗೆ ಸ್ಥಳದಲ್ಲಿದ್ದ ಸರ್ಜನ್ ಅವರ ಬಳಿ ಮಾಹಿತಿ ಪಡೆದ ಅವರು, ಕ್ರಿಮ್ಸ್ ನಲ್ಲಿ ಹೈದರ ರೋಗ ತಜ್ಞರು, ರೇಡಿಯಾಲಜಿಸ್ಟ್ ಸೇರಿದಂತೆ ಅಗತ್ಯವಿರುವ ತಜ್ಞ ವೈದ್ಯರ ನೇಮಕ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆಯ ಬಗ್ಗೆ ಸರ್ಕಾರಕ್ಕೆ ವರದಿ ಕಳುಹಿಸಲಾಗುವುದು ಎಂದರು.
ಆಸ್ಪತ್ರೆಯ ರೋಗಿಗಳ ವಾರ್ಡ್ಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿÄ್ಪತ್ತಮ ಚಿಕತ್ಸೆ ದೊರೆಯುತ್ತಿರುವ ಬಗ್ಗೆ ಮತ್ತು ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧಗಳನ್ನು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಆಸ್ಪತ್ರೆಯಲ್ಲಿನ ಎಕ್ಸ್ ರೇ ಕೊಠಡಿ, ನವಜಾತು ಶಿಶುಕೊಠಡಿ, ಮಹಿಳಾ ರೋಗಿಗಳನ್ನು ಭೇಟಿ ಮಾಡಿದ ಅವರು ವೈದ್ಯಕಿಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿನ ಮಕ್ಕಳ ವಾರ್ಡ್ ಗೆ ಭೇಟಿ ನಿಡಿದ ಅವರು ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುತ್ತಿರುವ ಚಿಕಿತ್ಸಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು, ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪೊಲಿಯೋ ಹನಿ ಹಾಕಿದರು.
ನಂತರ ಆಸ್ಪತ್ರೆಯ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಉಂಟಾಗುವ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಹಾಗು ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಗಳಿದ್ದಲ್ಲಿ ಕೂಡಲೇ ಅವುಗಳನ್ನು ನಾಶ ಪಡಿಸುವಂತೆ ಮತ್ತು ಹೆಚ್ಚವರಿ ಔಷಧಗಳಿದ್ದಲ್ಲಿ ಅಗತ್ಯವಿರುವ ಆಸ್ಪತ್ರೆಗಳಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ಆಂಬುಲೈನ್ಸ್ ಕೊರತೆಯಿರುವ ಬಗ್ಗೆ ದೂರು ಕೇಳಿ ಬಂದಿದ್ದು ಹೆಚ್ಚುವರಿ 2 ಹೊಸ ಆಂಬುಲೆನ್ಸ್ ಗಳನ್ನು ಖರೀದಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಕೆಲಸ ನಿರ್ವಹಿಸದಂತೆ ಸೂಚನೆ ನೀಡುವಂತೆ ಸರ್ಜನ್ ರಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ.ಸಿಇಓ ಈಶ್ವರ ಕಾಂದೂ, ಎಸ್ಪಿ ವಿಷ್ಣುವರ್ಧನ್, ಲೋಕಾಯುಕ್ತ ಉಪ ನಿಬಂಧಕರಾದ ರಾಜಶೇಖರ್, ಚನ್ನಕೇಶವ ರೆಡ್ಡಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಜಿಲ್ಲಾ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ,ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು