ಕಾರವಾರ : ಉತ್ತರಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ರೂಪಾಲಿ ಎಸ್ ನಾಯ್ಕ ಅವರ ನೇತೃತ್ವದಲ್ಲಿ ಮಹಿಳಾ ಮೋರ್ಚಾದ ನಾರಿಶಕ್ತಿ ವಂದನ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರವಾರ ನಗರದ ಮಾಲಾದೇವಿ ಮೈದಾನದಿಂದ ಶ್ರೀ ಸಿದ್ದಿ ವಿನಾಯಕ ದೇವಾಲಯದವರೆಗೆ ಬೃಹತ್ ಮೆರವಣಿಗೆ ಯಶಸ್ವಿಯಾಗಿ ನಡೆಯಿತು…
ಈ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್ ನಾಯ್ಕ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ 33 ಮಿಸಲಾತಿಯನ್ನು ನೀಡಿದ್ದಕ್ಕೆ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹೆಣ್ಣುಮಕ್ಕಳಿಗೆ ಶಕ್ತಿ ನೀಡಲು ಮೊದಲ ಬಾರಿಗೆ ಈ ಮಸೂದೆಯನ್ನು ಜಾರಿಗೆ ತಂದಿದ್ದಾರೆ. ಕಾಡಿಗೆ ಹೋಗಿ ಕಟ್ಟಿಗೆ ತರುವುದನ್ನು ತಪ್ಪಿಸಿ ಮಹಿಳೆಯರ ಕಣ್ಣಿರು ಒರೆಸಲು ಉಜ್ವಲ ಗ್ಯಾಸ್ ಯೋಜನೆಯನ್ನು ಜಾರಿಗೆ ತಂದು ಸುಮಾರು 8 ಕೋಟಿ ಜನರಿಗೆ ಸೌಲಭ್ಯ ಒದಗಿಸಿದ್ದಾರೆ ಎಂದು ಹೇಳಿದ್ರು…
ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ. ರೈತ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೊಟ್ಯಾಂತರ ಜನರ ಕನಸಾಗಿದ್ದ ಪ್ರಭು ಶ್ರೀ ರಾಮ ಮಂದಿರ ನಿರ್ಮಾಣ ಮಾಡಿ ಜನರ ಕನಸು ನನಸಾಗಿಸಿದ್ದಾರೆ. ಕಾಶಿ, ಮಥುರಾ, ವಾರಣಾಸಿ ಹೀಗೆ ವಿವಿಧ ಸ್ಥಳಗಳ ದೇವಾಲಯಗಳ ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಅಲ್ಲದೇ, ಭಕ್ತಾದಿಗಳಿಗೆ ತೆರಳಲು ಅನುಕೂಲವಾಗುವಂತೆ ಮಾಡಿದ್ದಾರೆ. ನಮ್ಮೆಲ್ಲರಿಗೂ ಮೋದಿಯೇ ಗ್ಯಾರಂಟಿ.. ಬೇರೆ ಯಾವುದೇ ಗ್ಯಾರಂಟಿ ವಾರಂಟಿಗಳಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿಯ ಹೆಸರಿನಲ್ಲಿ ಬಡ ಜನರಿಗೆ ತೊಂದರೆಕೊಡುತ್ತಿದೆ ಎಂದು ಆರೋಪಿಸಿದ್ರು…
ಇನ್ನು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಮೂರು ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದು ಮ್ಯಾರಥಾನ್ ಪೂರ್ಣಗೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ಮಂಗಳವಾರ ಬೈಕ್ ರ್ಯಾಲಿ, ಮತ್ತು ಮೂರನೆಯ ದಿನ ಮಾನ್ಯ ಪ್ರಧಾನ ಮಂತ್ರಿಗಳು ಮಾತನಾಡುವ ಮೂಲಕ ಸಮಾರೋಪಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ಕೊಟ್ರು…
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಭಟ್ಟ, ಕಾರವಾರ ಮಹಿಳಾ ಮೋರ್ಚಾದ ಕಲ್ಪನಾ ನಾಯ್ಕ, ವೈಶಾಲಿ ತಾಂಡೇಲ, ಕಾರವಾರ ನಗರ ಮಂಡಲದ ನಾಗೇಶ ಕುರ್ಡೇಕರ ಹಾಗೂ ಗ್ರಾಮೀಣ ಮಂಡಲದ ಸುಭಾಷ ಗುನಗಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕರು, ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚಾ ಪ್ರಮುಖರು, ಯುವ ಮೋರ್ಚಾ ಸೇರಿದಂತೆ ಮತ್ತಿತರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು…