ಹೊಟೆಲ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಮಹಿಳೆ: ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು

ಕುಮಟಾ: ಹೊಟೆಲ್‌ನಲ್ಲಿ ಊಟ ಸೇವಿಸುತ್ತಿರುವ ವೇಳೆ ಮಹಿಳೆಯೊಬ್ಬಳು ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಗೋಕರ್ಣದಲ್ಲಿ ಸಂಭವಿಸಿದೆ. ಗೋಕರ್ಣ ಸಮೀಪದ ಗಂಗೆಕೊಳ್ಳದ ನಿವಾಸಿ ಸುಮಿತ್ರಾ ಗೋವಿಂದ ಕುರ್ಲೆ ಸಾವನ್ನಪ್ಪಿದ ಮಹಿಳೆ.

ಈಕೆ ಗೋಕರ್ಣದ ಖಾಸಗಿ ಹೊಟೆಲ್‌ವೊಂದರಲ್ಲಿ ಊಟ ಸೇವಿಸುತ್ತಿರುವಾಗ ಆಕಸ್ಮಿಕವಾಗಿ ಕುಸಿದು ಬಿದ್ದು ಅಸ್ವಸ್ತಗೊಂಡಿದ್ದಳು. ತಕ್ಷಣ 108 ಅಂಬ್ಯುಲೆನ್ಸ್ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಕುರಿತು ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.