ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ – ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

ಬೆಂಗಳೂರು/ ಬಳ್ಳಾರಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ (Bengaluru) ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ (Tumakauru) ಇಳಿದಿದ್ದಾನೆ. ತುಮಕೂರಿನಿಂದ ಬಳ್ಳಾರಿಗೆ (Ballari) ಬಸ್‌ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್‌ ಹತ್ತಿ ಭಟ್ಕಳಕ್ಕೆ (Bhatkal) ತೆರಳಿರುವ ಶಂಕೆ ವ್ಯಕ್ತವಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ (NIA)  ಬಳ್ಳಾರಿ ಮತ್ತು ತುಮಕೂರು ಬಸ್‌ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ (Reward) ಘೋಷಣೆ ಮಾಡಲಾಗಿದೆ. ಎನ್‌ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ.

ಭಟ್ಕಳದ ನೆಲೆಸಿಗದ ಮಂದಿಗೂ ಉಗ್ರರ ಜೊತೆ ನಂಟು ಇರುವುದು ಹೊಸದೆನಲ್ಲ.  ಹಲವು ಮಂದಿಗೆ ಈ ಹಿಂದೆ ಉಗ್ರರ ಜೊತೆ ಸಂಪರ್ಕ ಇರುವುದು ತನಿಖೆಯಿಂದ ದೃಢಪಟ್ಟಿತ್ತು. ಈ ಹಿಂದೆ ಭಟ್ಕಳ​ ಸಹೋದರರಾದ ರಿಯಾಜ್​ ಮತ್ತು ಇಕ್ಬಾಲ್ ಅವರನ್ನು ಕೇಂದ್ರ ಸರ್ಕಾರ ಉಗ್ರರ ಪಟ್ಟಿಗೆ ಸೇರಿಸಿತ್ತು. 

ಇದೇ ಜನವರಿ ಕೊನೆಯ ವಾರದಲ್ಲಿ ಮುಂಬೈನಲ್ಲಿ ಬಂಧನವಾದ ಶಂಕಿತ ಉಗ್ರನೋರ್ವನ ಜತೆ ನಂಟು ಹೊಂದಿರುವ ಆರೋಪದಡಿ ಭಟ್ಕಳದ ಮಹಿಳೆಯ ಮನೆಯ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರದ ದಳ ಮಾಡಿ ವಶಕ್ಕೆ ಪಡೆದಿತ್ತು.