ಉಷ್ಣಾಂಶ ಹೆಚ್ಚಳ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ

ಕಾರವಾರ: ಭಾರತೀಯ ಹವಾಮಾನ ಇಲಾಖೆಯು 2024 ರ ಮಾರ್ಚ್ನಿಂದ ಮೇ ತಿಂಗಳವರೆಗಿನ ಉಷ್ಣತೆ ಮತ್ತು ಮಳೆಯ ದೀರ್ಘಾವಧಿ ಮುನ್ಸೂಚನೆಯನ್ನು ಮಾರ್ಚ್ 1, 2024 ರಂದು ಬಿಡುಗಡೆ ಮಾಡಿದ್ದು, ಇದು ಉತ್ತರ ಕನ್ನಡ ಜಿಲ್ಲೆಯಲ್ಲಿ (ಜೊಯ್ದಾ ತಾಲ್ಲೂಕಿನ ಕೆಲವು ಭಾಗಗಳನ್ನು ಹೊರತುಪಡಿಸಿ) ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣತೆಯನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.
ಈ ಹೆಚ್ಚಿನ ಉಷ್ಣತೆಯು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಮತ್ತು ಅಗ್ನಿ ಅವಘಡಗಳ ಅಪಾಯವನ್ನು ಹೆಚ್ಚಿಸಬಹುದಾಗಿದ್ದು, ಈ ನಿಟ್ಟಿನಲ್ಲಿ, ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿರುತ್ತದೆ.
ದೇಹದ ನೀರಿನಂಶ ಕಾಯ್ದುಕೊಳ್ಳಿ: ಬಿಸಿಲಿನ ಉತ್ತುಂಗ ಸಮಯದಲ್ಲಿ ಹೊರಗೆ ಹೋಗುವುದನ್ನು ಕಡಿಮೆ ಮಾಡಿ ಮತ್ತು ಸಾಕಷ್ಟು ನೀರು ಕುಡಿಯಿರಿ, ತಂಪು ಪಾನೀಯ (Soಜಿಣ ಆಡಿiಟಿಞs) ಗಳಿಗಿಂತ ನೀರನ್ನು ಆಯ್ಕೆ ಮಾಡಿ. ಸೂರ್ಯನ ಕಿರಣಗಳಿಂದ ರಕ್ಷಣೆ ಪಡೆಯಿರಿ: ಬಿಸಿಲಿನ ಸಮಯದಲ್ಲಿ ಹೊರಗೆ ಹೋಗಬೇಕಾದರೆ, ಟೊಪ್ಪಿ, ಸನ್‌ಸ್ಟೀನ್ ಲೋಷನ್, ಮತ್ತು ಸೂರ್ಯನ ಕಿರಣಗಳನ್ನು ತಡೆಯುವಂತಹ ಬಟ್ಟೆಗಳನ್ನು ಧರಿಸಿ. ಆರೋಗ್ಯದ ಮೇಲೆ ನಿಗಾ ವಹಿಸಿ: ಅತಿಯಾದ ಬೆವರುವಿಕೆ, ಆಯಾಸ, ಮತ್ತು ತಲೆತಿರುಗುವಿಕೆಯಂತಹ ಲಕ್ಷಣಗಳಿಗೆ ಗಮನ ಕೊಡಿ. ಈ ಲಕ್ಷಣಗಳು ಕಂಡುಬAದರೆ, ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ.
ಅಗ್ನಿ ಅವಘಡಗಳನ್ನು ತಡೆಯಿರಿ: ಸುಟ್ಟುಗುಂಟೆಗಳನ್ನು ಎಚ್ಚರವಾಗಿ ನಂದಿಸಿ ಮತ್ತು ತೆರೆದ ಪ್ರದೇಶಗಳಲ್ಲಿ ಬೆಂಕಿ ಹಚ್ಚದಿರಿ. ಶಾರ್ಟ್ ಸರ್ಕ್ಯುಟ್‌ಗಳನ್ನು ತಡೆಯಲು ವಿದ್ಯುತ್ ಉಪಕರಣಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿ.
ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಚಿತ ಸಹಾಯವಾಣಿ ಸಂಖ್ಯೆ 1077/ 9483511015 (Whಚಿಣs ಂಠಿಠಿ) ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.