ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು, ಹರ್ಯಾಣ ಸಿಎಂ ಸ್ಥಾನಕ್ಕೆ ಮನೋಹರ್‌ ಲಾಲ್ ಖಟ್ಟರ್‌ ರಾಜೀನಾಮೆ

ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.

ನವದೆಹಲಿ ಮಾರ್ಚ್‌ 12 : ಲೋಕಸಭೆ ಚುನಾವಣೆಗೆ ಮುನ್ನ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.

ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ತಮ್ಮ ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ.

ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರು ಸಿಎಂ ಸ್ಥಾನಕ್ಕೇರಬಹುದು ಎನ್ನಲಾಗುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಲ್​ನಿಂದ ಖಟ್ಟರ್ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಮೈತ್ರಿ ಮುರಿದು ಬಿದ್ದಿದೆ ಆದರೆ ಎಂಎಲ್ ಖಟ್ಟರ್ ಸರ್ಕಾರವನ್ನು ಬೆಂಬಲಿಸುವ ಕೆಲವು ಸ್ವತಂತ್ರ ಶಾಸಕರು ಅದರ ಅಸ್ತಿತ್ವವನ್ನು ಖಚಿತಪಡಿಸುತ್ತಾರೆ ಎಂದು ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಹೇಳಿದ್ದಾರೆ ಎಂದು ವರದಿಯಾಗಿದೆ.