ಹಿರಿಯ ಜಾನಪದ ವಿದ್ವಾಂಸರಿಗೆ ತ್ರಿವರ್ಣ ಧ್ವಜ ನೀಡುವ ಮೂಲಕ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕೋಟಾ ಚಾಲನೆ

ಹೊನ್ನಾವರ: ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ,ಪಂ ಸಭಾಭವನದಲ್ಲಿ ನಡೆದ ‘ಹರ್ ಘರ್ ತಿರಂಗಾ’ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ ಅ.13ರಂದು ಭಾರತ ದೇಶದಲ್ಲಿನ ಪ್ರತಿ ಮನೆಯಲ್ಲಿ ಭಾರತ ದ್ವಜ ಹಾರಬೇಕೆನ್ನುವುದು ಕೇಂದ್ರ ಸರ್ಕಾರದ ಆಶಯ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿಯು ಸುಮಾರು ಒಂದು ಕೋಟಿ ಮನೆಗಳ ಮೇಲೆ ಅತ್ಯಂತ ಹೆಮ್ಮೆಯಿಂದ ಅಭಿಮಾನದಿಂದ ಭಾರತದ ತ್ರಿವರ್ಣ ಧ್ವಜ ಹಾರಿಸುವ ಉದ್ದೇಶವಿದೆ. ಪ್ರತಿ ಗ್ರಾಮ ಪಂಚಾಯಿತಿ ಮೂಲಕ ತ್ರಿವರ್ಣ ಧ್ವಜ ವಿತರಣೆ ಮಾಡಲಾಗುತ್ತಿದೆ. ಧ್ವಜವನ್ನು ಎಲ್ಲರೂ ಕೂಡ ಹಣ ಕೊಟ್ಟು ಖರೀದಿಸಬೇಕು ಎಂದರು‌.

ಎನ್ ಆರ್ ಎಲ್ ಎಮ್ ಸಂಜೀವಿನಿ ಯೋಜನೆ ಅಡಿ ಹೊನ್ನಾವರ ತಾಲೂಕಿನ ಗ್ರಾ.ಪಂ ಮಟ್ಟದ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ತ್ರಿವರ್ಣ ಧ್ವಜವನ್ನು ಸಾಂಕೇತಿಕವಾಗಿ ಹಿರಿಯ ಜಾನಪದ ವಿದ್ವಾಂಸ ಎನ್.ಆರ್ ನಾಯಕ್ ಅವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಧ್ವಜದ ಬಗ್ಗೆ ಬಹಳ ಕಾಳಜಿ ವಹಿಸಿ ಎಲ್ಲರೂ ಈ ಕಾರ್ಯಕ್ರಮ ಮಾಡಬೇಕಾಗಿದೆ. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿ ಆಗುತ್ತದೆ ಎನ್ನುವ ನಂಬಿಕೆ ಇದೆ ಎಂದರು.

ವೇದಿಕೆಯಲ್ಲಿ ಪಶ್ಚಿಮ ಘಟ್ಟ ಕಾರ್ಯಪಡೆ ನಿಗಮದ ಅಧ್ಯಕ್ಷ ಗೋವಿಂದ ನಾಯ್ಕ, ಪ,ಪಂ ಅಧ್ಯಕ್ಷ ಶಿವರಾಜ ಮೇಸ್ತ, ಉಪಾಧ್ಯಕ್ಷೆ ನಿಶಾ ಶೇಟ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಭಟ್, ತಹಶೀಲ್ದಾರ ನಾಗರಾಜ ನಾಯ್ಕಡ್, ಮತ್ತಿತರಿದ್ದರು.