ಭಟ್ಕಳದಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕನಿಗೆ ಗುದ್ದಿದ ಗೂಳಿ – ಗಂಭೀರ ಗಾಯ

ಭಟ್ಕಳ, ಮಾರ್ಚ್‌ 18 : ಶಾಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಗೂಳಿಯೊಂದು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಗುಳ್ಮಿ ರೈಲ್ವೆ ಬ್ರಿಡ್ಜ್ ಸಮೀಪ ನಡೆದಿದೆ.

ಗೂಳಿ ದಾಳಿಗೆ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ನಾಗಾರ್ಜುನ, ಗುಳ್ಮಿ ನಿವಾಸಿ ಎಂದು ಗುರುತಿಸಲಾಗಿದೆ. ಬಾಲಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣ್ಕುಳಿಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.

ನಾಗಾರ್ಜುನ ಎಂದಿನಂತೆ ಬೆಳ್ಳಿಗ್ಗೆ ಮನೆಯಿಂದ ಶಾಲೆಗೆಂದು ಬರುವ ವೇಳೆ ಇಲ್ಲಿನ ರೈಲ್ವೆ ಬ್ರಿಡ್ಜ್ ಸಮೀಪ ಏಕಾಏಕಿ ಗೂಳಿಯೊಂದು ದಾಳಿ ಮಾಡಿದೆ.  ದಾಳಿಯಿಂದಾಗಿ ಬಾಲಕನ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದ್ರೀಗ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ…