ಅಂಕೋಲಾದಲ್ಲಿ ₹ 87,152 ಮೌಲ್ಯದ ಅಕ್ರಮ ಗೋವಾ ಸಾರಾಯಿ ವಶ

ಅಂಕೋಲಾ: ಪಟ್ಟಣಕ್ಕೆ ಹೊಂದಿಕೊಂಡಿರುವ ತಾಲೂಕಿನ ಗ್ರಾಮೀಣ ಪ್ರದೇಶವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 87,152 ಮೌಲ್ಯದ ಗೋವಾ ಸಾರಾಯಿ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರವಾರ ತಾಲೂಕಿನ ಮಾಜಳಿಯ ಜ್ಞಾನೇಶ್ವರ ಸುರೇಶ ಕಿಂದಳಕರ ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ಮಧ್ಯರಾತ್ರಿ ಒಂದು ಗಂಟೆಯ ಸುಮಾರಿಗೆ ಆರೋಪಿ ಹುಂಡೈ ಕಾರಿನಲ್ಲಿ ತಾಲ್ಲೂಕಿನ ಬೊಬ್ರುವಾಡ ಗ್ರಾಮದ ನದಿಭಾಗದ ಸಮೀಪದಲ್ಲಿ ಸಾರಾಯಿ ಸಾಗಟ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆಗೆ ದಾಳಿ ನಡೆಸಿದ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಹುಂಡೈ ಕಾರು ಮತ್ತು ಸಾರಾಯಿ ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಅಬಕಾರಿ ಕಾಯಿದೆ 1965ರ ಅನ್ವಯ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.