ಅಧಿಕಾರಿಗಳ ಕಿರುಕುಳ; ಬಸ್‌ನಲ್ಲೇ ವಿಷ ಕುಡಿದು ಒದ್ದಾಡಿದ ಕೆಎಸ್‌ಆರ್‌ಟಿಸಿ ಡ್ರೈವರ್‌

Shivamogga News : ಸಾರಿಗೆ ಇಲಾಖೆಯಲ್ಲಿ ಮತ್ತೆ ಅಧಿಕಾರಿಗಳ ಕಿರುಕುಳದ (Harassment by officials) ಕೂಗು ಕೇಳಿ ಬರುತ್ತಿದೆ. ಶಿವಮೊಗ್ಗದಲ್ಲಿ ಅಧಿಕಾರಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಕೆಎಸ್‌ಆರ್‌ಟಿಸಿಯ ಡ್ರೈವರ್‌ ಕಂ ಕಂಡಕ್ಟರ್‌ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ.

ಶಿವಮೊಗ್ಗ, ಮಾರ್ಚ್‌ 24 : ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಡ್ರೈವರ್ ಕಂ ಕಂಡಕ್ಟರ್ (Ksrtc Driver) ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಶಿವಮೊಗ್ಗದ (Shivamogga News) ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ (Shivamogga bus Stand) ಘಟನೆ ನಡೆದಿದೆ. ಹೊನ್ನಾಳಿ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ್ (38) ಆತ್ಮಹತ್ಯೆಗೆ ಯತ್ನಿಸಿದವರು.

10 ವರ್ಷದಿಂದ ಕೆಎಸ್‌ಆರ್‌ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಅವರು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹೊನ್ನಾಳ್ಳಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್‌ನನ್ನು ಅಧಿಕಾರಿಗಳು ವಿಚಾರಣೆಗೆಂದು ಕರೆಸಿಕೊಂಡಿದ್ದರು. ತನ್ನ ವಿರುದ್ಧ ದಾಖಲಾಗಿದ್ದ ಕೇಸ್‌ಗೆ ಮನ ನೊಂದ ಬಸವರಾಜ್‌ ಶಿವಮೊಗ್ಗ-ಭದ್ರಾವತಿ ಮಾರ್ಗವಾಗಿ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಿನ್ನೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಷ ಸೇವಿಸಿ ಒದ್ದಾಡುತ್ತಿದ್ದ ಬಸವರಾಜ್‌ನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.