IPL 2024: ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ಸಹ-ಮಾಲೀಕ ಶಾರುಖ್ ಖಾನ್(Shah Rukh Khan) ಅವರು ಶನಿವಾರ ನಡೆದ ಸನ್ರೈಸರ್ಸ್ ಹೈದರಾಬಾದ್(Sunrisers Hyderabad) ನಡುವಣ ಪಂದ್ಯದಲ್ಲಿ ಸಿಗರೇಟ್ ಸೇದಿ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕೋಲ್ಕತ್ತಾ, ಮಾರ್ಚ್ 24 : ಇತ್ತೀಚೆಗೆ ಪಾಕಿಸ್ತಾನ್ ಸೂಪರ್ ಲೀಗ್ (PSL) ಫೈನಲ್(PSL Final) ಪಂದ್ಯದ ವೇಳೆ ಇಮಾದ್ ವಾಸಿಂ(Imad Wasim) ಅವರು ಡ್ರೆಸ್ಸಿಂಗ್ ರೂಮ್ ನಲ್ಲಿ ಸಿಗರೇಟ್ ಸೇದಿ ಬಾರಿ ಟೀಕೆಗೆ ಗುರಿಯಾಗಿದ್ದರು. ಇದೀಗ ಇಂತಹದ್ದೇ ಘಟನೆನೊಂದು ಪ್ರಸಕ್ತ ಸಾಗುತ್ತಿರುವ ಐಪಿಎಲ್ನಲ್ಲಿಯೂ ನಡೆದಿದೆ. ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ಸಹ-ಮಾಲೀಕ ಶಾರುಖ್ ಖಾನ್(Shah Rukh Khan) ಅವರು ಶನಿವಾರ ನಡೆದ ಸನ್ರೈಸರ್ಸ್ ಹೈದರಾಬಾದ್(Sunrisers Hyderabad) ನಡುವಣ ಪಂದ್ಯದಲ್ಲಿ ಸಿಗರೇಟ್ ಸೇದಿ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಶಾರುಖ್ ಖಾನ್ ಅವರು ಈ ರೀತಿಯ ದುರ್ವರ್ತನೆ ತೋರುತ್ತಿರುವುದು ಇದೇ ಮೊದಲೇನಲ್ಲ. 2012ರ ಐಪಿಎಲ್ನಲ್ಲಿ ಮುಂಬೈಯ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಕೆಕೆಆರ್ ಗೆದ್ದಿತ್ತು. ಈ ವೇಳೆ ಶಾರುಖ್ ಖಾನ್ ಅವರು ಕುಡಿತ ಮತ್ತಿನಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಅಸಹ್ಯವಾಗಿ ಜಗಳವಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಐದು ವರ್ಷಗಳ ಕಾಲ ವಾಂಖೆಡೆ ಸ್ಟೇಡಿಯಂ ಪ್ರವೇಶಿಸದಂತೆ ನಿಷೇಧ ಹೇರಲಾಗಿತ್ತು. ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿಯೂ ಹಿಂದೊಮ್ಮೆ ಶಾರುಖ್ ಸಿಗರೇಟ್ ಸೇದಿ, ಈ ಸಂಬಂಧ ಅವರ ವಿರುದ್ಧ ಜೈಪುರದ ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣವೂ ದಾಖಲಾಗಿತ್ತು. ಇದೀಗ ಮತ್ತೆ ಸಿಗರೇಟ್ ಸೇದಿ ಟೀಕೆಗೆ ಗುರಿಯಾಗಿದ್ದಾರೆ.
ಶಾರುಖ್ ಖಾನ್ ಅವರು ಸಿಗರೇಟ್ ಸೇದುತ್ತಿರುವ ಫೋಟೊ ಪಂದ್ಯದ ಕ್ಯಾಮೆರಾದಲ್ಲಿ ಕಂಡು ಬಂದಿದೆ. ಈ ಫೋಟೊ ಕಂಡ ಅನೇಕ ನೆಟ್ಟಿಗರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.