ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಪವನ್ ಕಲ್ಯಾಣ್ ಅವರ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಜನ ಸೇನಾ ಪಕ್ಷದ (Jana Sena Party) ಮುಖ್ಯಸ್ಥ ಪವನ್ ಕಲ್ಯಾಣ್ ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪೀಠಂಪುರಂ ಕ್ಷೇತ್ರದಿಂದ (Anushka Shetty) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಇದೀಗ ನಟಿ ಅನುಷ್ಕಾ ಶೆಟ್ಟಿ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷದ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಪವನ್ ಕಲ್ಯಾಣ್ ಅವರ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ನಟಿ ರಾಜಕೀಯ ಎಂಟ್ರಿಗೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಚಿತ್ತೂರು ಜಿಲ್ಲೆ ಎಪಿಯಲ್ಲಿ ಸಚಿವೆ ಹಾಗೂ ನಟಿ ರೋಜಾ (ವೈಎಸ್‌ಆರ್‌ಸಿಪಿ) ಅವರಿಗೆ ಸ್ಪರ್ಧಿಸಲು ಅನುಷ್ಕಾ ಅವರನ್ನು ಕಣಕ್ಕಿಳಿಸಲು ಜನ ಸೇನಾ ಮುಂದಾಗಿದೆ ಎನ್ನಲಾಗಿದೆ.
ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರ ಮತ್ತು ಒಟ್ಟು 175 ವಿಧಾನಸಭಾ ಕ್ಷೇತ್ರಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಒಟ್ಟು 175 ಸ್ಥಾನಗಳ ಪೈಕಿ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 144 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಕಡೆ ಸ್ಪರ್ಧಿಸಲಿದೆ. ಟಿಡಿಪಿ 17 ಕ್ಷೇತ್ರ ಮತ್ತು ಜನಸೇನಾ ಪಕ್ಷವು 2 ಕಡೆ ಕಣಕ್ಕಿಳಿಯಲಿದೆ.