ಯೋಗಿ ಹತ್ಯೆ ಮಾಡುವುದಾಗಿ ಪೊಲೀಸರಿಗೇ ಬಂತು ಬೆದರಿಕೆ ಸಂದೇಶ

ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಪೊಲೀಸ್ ಸಹಾಯವಾಣಿಯ ವಾಟ್ಸಪ್‌ಗೆ ಬೆದರಿಕೆ ಸಂದೇಶವೊಂದು ಬಂದಿದೆ. ಈ ಕುರಿತು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಕಮಾಂಡರ್ ಸುಭಾಷ್ ಕುಮಾರ್ ಎಫ್‌ಐಆರ್ ದಾಖಲಿಸಿದ್ದಾರೆ.

ಬಾಂಬ್ ಹಾಕಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡುವುದಾಗಿ ಪೊಲೀಸ್ ಇಲಾಖೆಯ 112 ಸಹಾಯವಾಣಿಯ ವಾಟ್ಸಪ್‌ಗೆ ಶಾಹಿದ್ ಎಂಬ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬರ್ ವಿಭಾಗ ಮತ್ತು ವಿಚಕ್ಷಣ ದಳದ ಅಧಿಕಾರಿಗಳು ಸಂದೇಶ ಕಳುಹಿಸಿದವರ ಪತ್ತೆಗೆ ಜಾಲ ಬೀಸಿದ್ದಾರೆ.