ಚುನಾವಣಾ ಅನುಮತಿ ಪಡೆಯುವ ಬಗ್ಗೆ

ಕಾರವಾರ:- 12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತಂತೆ , ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ವಿವಿಧ ರೀತಿಯ ಅನುಮತಿಗಳಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.