ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನ ಫಲಿತಾಂಶ ಪ್ರಕಟ : ನೂರಕ್ಕೆ ನೂರು ದಾಖಲೆಯ ಫಲಿತಾಂಶ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಗೋರೆ, ಕುಮಟಾ ಇದರ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನೂರಕ್ಕೆ ನೂರು ದಾಖಲೆಯ ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 93 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 30 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ನಲ್ಲಿ, 11 ಜನ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕುಮಾರ ಪ್ರಣವ್ ಎಂ.ಭಟ್ಟ 589 ಅಂಕ (98.16%), ಕುಮಾರಿ ಅಪೂರ್ವ ಜಿ ಭಟ್ಟ 580 (96.16%), ಕುಮಾರ ಸೌರವ್ ಗಾವ್ಕರ್ 578(96.33%) ಅಂಕ ಪಡೆಯುವುದರೊಂದಿಗೆ ಮೊದಲ ಮೂರು ಸ್ಥಾನ ಪಡೆದರೆ ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಐದು ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 19 ಜನ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 05 ಜನ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕುಮಾರ ರುತ್ವಿಕ್ ಹೆಬ್ಬಾರ 564(93.83%), ಕುಮಾರಿ ಶ್ರೇಯಾ ಭಟ್ಟ 522(92%), ಕುಮಾರಿ ಸ್ಪೂರ್ತಿ ಹೆಗಡೆ 549(91.5%) ಅಂಕ ಪಡೆಯುವುದರೊಂದಿಗೆ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಜಿ.ಜಿ.ಹೆಗಡೆ, ಪ್ರಾಂಶುಪಾಲರಾದ ಡಿ. ಎನ್. ಭಟ್ಟ ಸೇರಿದಂತೆ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.