ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್​ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ, ಏಪ್ರಿಲ್​ 01: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial custody) ನೀಡಿ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.