ಅನಾರೋಗ್ಯ ಹಿನ್ನೆಲೆ ನಟ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು

Shiva Rajkumar: ನಟ ಶಿವರಾಜ್‌ ಕುಮಾರ್‌ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ, ಜನರಲ್‌ ಚೆಕಪ್‌ಗಾಗಿ ಆಗಮಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ಆರೋಗ್ಯ ತಪಾಸಣೆ ಬಳಿಕ ಅವರು ಡಿಸ್ಚಾರ್ಜ್‌ ಆಗಲಿದ್ದಾರೆ.

ಬೆಂಗಳೂರು, ಏಪ್ರಿಲ್ 01 : ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ಶಿವರಾಜ್‌ ಕುಮಾರ್‌ (Shiva Rajkumar) ಅವರು ನಗರದ ವೈದೇಹಿ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ನಟನಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ, ಜನರಲ್‌ ಚೆಕಪ್‌ಗಾಗಿ ಆಗಮಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಓಡಾಡಿದ್ದರು. ಶಿವಮೊಗ್ಗ ಸುತ್ತಮುತ್ತ ಪ್ರಚಾರದ ಮೊದಲ ಹಂತ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಆಪ್ತರು, ಚಿತ್ರರಂಗದ ಗಣ್ಯರು ಭೇಟಿ ಶಿವಣ್ಣ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ನಟ ಗುರುದತ್ ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅದೇ ರೀತಿ ಪುತ್ರಿ ನಿರುಪಮಾ ಅವರು ಶಿವರಾಜ್‌ ಕುಮಾರ್‌ ಅವರ ಆರೋಗ್ಯ ವಿಚಾರಿಸಿ ತೆರಳಿದ್ದು, ಶಿವಣ್ಣ ಅವರು ಬಹುತೇಕ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಆರೋಗ್ಯ ತಪಾಸಣೆ ಮುಗಿದ ಬಳಿದ ಶಿವರಾಜ್ ಕುಮಾರ್ ಅವರು ಮನೆಗೆ ಹೋಗಲಿದ್ದಾರೆ.