ಸಾಮಾಜಿಕ ಜಾಲ ತಾಣದಲ್ಲಿ ಕಾನೂನುಬಾಹಿರ ಸುದ್ದಿ ತಡೆಗೆ ರಚನೆಯಾಗಿದೆ ಪ್ರತ್ಯೇಕ ಉಸ್ತುವಾರಿ ಕೋಶ

ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳ ಪ್ರಸಾರವು ಅತ್ಯಧಿಕವಾಗಿದ್ದು,ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ತೆರೆಯಲಾಗಿದೆ.

ಅಂರ್ತಜಾಲದಲ್ಲಿ ಪ್ರಕಟಗೊಳ್ಳುವ ಸುದ್ದಿಗಳು, ಪ್ರಸ್ತಕ ವಿದ್ಯಮಾನಗಳು ಮತ್ತು ಓಟಿಟಿ ಪ್ಲಾಟ್ ಫಾರಂ ನಲ್ಲಿ (ಉತ್ಪೆçÃಕ್ಷಿತ) ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಸೈಬರ್ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಸೆಲ್‌ನ್ನು ರಚಿಸಲಾಗಿದೆ.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು, ಹಾಗೂ ಚುನಾವಣೆ ನೀತಿ ಸಂಹಿತೆ ಉಲಂಘನೆ ಮಾಡಿ ಸಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಮಾಡುವವರ ಮೇಲೆ ನಿಗಾ ಇಡಲು ಸಮಾಜಿಕ ಜಾಲತಾಣ ಕೋಶವನ್ನು ಜಿಲ್ಲೆಯಲ್ಲಿ ರಚನೆಯಾಗಿದ್ದು, ಇದು 24*7 ಕಾರ್ಯನಿರ್ವಹಿಸಲಿದೆ.

ಈ ಕೋಶದಲ್ಲಿ ನೋಡಲ್ ಅಧಿಕಾರಿಯಾಗಿ ಉತ್ತರ ಕನ್ನಡ ಪೊಲೀಸ್ ಇಲಾಖೆಯ ಡಿಎಸ್‌ಬಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಎನ್‌ಐಸಿ ಅಧಿಕಾರಿ, ಹಾಗೂ 2 ಜನ ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿ ಕಚೇರಿಯ ತಾಂತ್ರಿಕ ಸಮಾಲೋಚಕರು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಕೋಶವು ಸಾಮಾಜಿಕ ಜಾಲತಾಣಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್, ಟೆಲಿಗ್ರಾಂ, ಇನಸ್ಟಾಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್‌ಗಳಲ್ಲಿ ಪ್ರಚಾರವಾಗುವ ಎಲ್ಲಾ ಬಗೆಯ ಸುದ್ದಿ ಮತ್ತು ಆಡಿಯೋ ವಿಡಿಯೋ ಸಂದೇಶಗಳ ಮೇಲೆ ಹದ್ದಿನ ಕಣ್ಣು ಇಡುವ ಮೂಲಕ ಸುಳ್ಳು ಸುದ್ದಿಗಳ ನಿಯಂತ್ರಣ ಮಾಡಲಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಪ್ರಕರಣಗಳು ಕಂಡು ಬಂದಲ್ಲಿ, ಸಂಬAಧಪಟ್ಟ ಸುದ್ದಿ ಅಥವಾ ವಿಡಿಯೋ ಪ್ರಸಾರದ ಮೂಲವನ್ನು ಪತ್ತೆಹಚ್ಚಿ, ಸಂಬAಧಿಸಿದ ಲಿಂಕ್, ಸ್ಕಿçÃನ್‌ಶಾಟ್‌ಗಳ ದಾಖಲೆ ಸಹಿತ, ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಪಡಿಸುವವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಪೊಲೀಸ್ ಕಾಯ್ದೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಜಿಲ್ಲೆಯಲ್ಲಿ ಮುಕ್ತ ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ತಂಡಗಳನ್ನು ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಿಗೆ ಗೊಂದಲ ಮೂಡಿಸುವುದರ ಜೊತೆಗೆ ಸುಗಮ ಮತ್ತು ಶಾಂತಿಯುತ ಚುನಾವಣೆ ನಡೆಯುವುದಕ್ಕೆ ಅಡ್ಡಿಪಡಿಸುವುದನ್ನು ತಡೆಯಲು ಜಿಲ್ಲಾ ಮಟ್ಟದ ಸೋಷಿಯಲ್ ಮಿಡಿಯಾ ದೂರು ಕೋಶ ರಚಿಸಲಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹೆಚ್ಚಿನ ನಿಗಾ ವಹಿಸಲಾಗಿದೆ…. ಗಂಗೂಬಾಯಿ ಮಾನಕರ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ.