ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ

ಕಾರವಾರ, ಏ.2 (ಕರ್ನಾಟಕ ವಾರ್ತೆ):- ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ -2024 ಕಾರ್ಯಕ್ರಮವು ಪೊಲೀಸ್ ಕವಾಯತು ಮೈದಾನದಲ್ಲಿ ಏ.2 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ, ನಿವೃತ್ತ ಪೊಲೀಸ್ ಉಪಾಧೀಕ್ಷಕ ವೆಲೆಂಟೈನ್ ಡಿಸೋಜಾ ಮಾತನಾಡಿ, ಪೊಲೀಸರು ತಮ್ಮ ಕರ್ತವ್ಯದಲ್ಲಿ ಒತ್ತಡಗಳಿಗೆ ಒಳಗಾಗದೇ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದರು.

            ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಎನ್, ಮಾತನಾಡಿ, ಪೊಲೀಸ್ ಧ್ವಜ ದಿನಾಚರಣೆಯ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿ, ಜಿಲ್ಲೆಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃಧ್ದಿ ಕಾರ್ಯಕ್ರಮಗಳಿಗೆ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು.

            ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ , ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಎಸ್ ನಾಯ್ಕ್ ಉಪಸ್ಥಿತರಿದ್ದರು.